ನೋಡಿದರೆ ಅವರಿರುವುದು ಜರ್ಮನಿಯ ಪ್ರಖ್ಯಾತ ಹೇಸ್ ಕಂಪೇನಿಯ ಪಿನೊ ಎನ್ನುವ ಇಬ್ಬರು ಪ್ರಯಾಣಿಸಬಹುದಾದ ಸೈಕಲು. ಪ್ರಾಯುಶ: ಈ ಸೈಕಲು ಇನ್ನೊಮ್ಮೆ ನೋಡುವ ಅವಕಾಶ ಸಿಗುವುದು ದುರ್ಲಬ. ಕೂಡಲೆ ಪೆಡಲಿಸಿದೆ ರಸ್ತೆ ಬದಿಗೆ. ಕಾಲು ಗಂಟೆಯೊಳಗೆ ಅವರು ಆಗಮಿಸಿದರು. ಒಬ್ಬ ಸೈಕಲ್ ಆಸಕ್ತ ನಿಮಗೆ ದಾರಿಯಲ್ಲಿ ಸಿಗಬಹುದೆಂಬ ಸೂಚನೆ ಮೊದಲೇ ಸುಬ್ಬಣ್ಣ ಅವರಿಗಿತ್ತಿದ್ದರು ಅನಿಸುತ್ತದೆ.
ಐದು ನಿಮಿಷ ಮಾತುಕಥೆಯ ಅನಂತರ ನಾನಂದೆ – ಇಲ್ಲಿ ಮಾರ್ಗದ ಬದಿ ಬಿಸಿಲಲ್ಲಿ ನಿಂತು ಮಾತನಾಡುವ ಬದಲು ಆರು ಕಿಮಿ ಮುಂದೆ ಕಲ್ಲಡ್ಕದಲ್ಲಿ ವಿಶಿಷ್ಟವಾದ ಚಾ ಕುಡಿಯೋಣ. ನಾನು ನಿಮ್ಮ ಜತೆ ಬರುತ್ತೇನೆ ಅಂದೆ. ಸಮ್ಮತಿಸಿದರು. ಕಲ್ಲಡ್ಕವರೆಗೆ ಹೆಚ್ಚಿನ ಬಾಗ ನಾನವರ ಅನುಸರಿಸಿದೆ. ಹಾಗೆ ಅವರ ಸೈಕಲ್ ಹಾಗೂ ಹಿಂಬಾಲಕ ಗಾಡಿಯ ವರ್ತನೆ ನೋಡುವ ಅವಕಾಶ ಸಿಕ್ಕಿತು.
ಎದುರು ಕುಳಿತ ವ್ಯಕ್ತಿಯ ಬಾರ ಮುಂದಿನ ಚಕ್ರದ ಮೇಲೆ ಬೀಳುವ ಕಾರಣ ರಸ್ತೆ ಹಿಡಿತ ಉತ್ತಮ. ರಸ್ತೆ ಹಾಗೂ ಸುತ್ತುಮುತ್ತಲ ಪರಿಸರವ ಇಬ್ಬರಿಗೂ ಏಕಕಾಲಕ್ಕೆ ನೋಡುವ ಅವಕಾಶ. ಇಬ್ಬರೂ ಅವರವರ ಸಾಮರ್ಥ್ಯದ ಅನುಸಾರವಾಗಿ ತುಳಿಯಬಹುದು. ಬೆಲೆ ಸುಮಾರು ಎರಡೂವರೆ ಲಕ್ಷ ರೂಪಾಯಿಯಿಂದ ಪ್ರಾರಂಬ. ಈ ನವೀನ ಸೈಕಲು ಹೇಸ್ ಕಂಪೇನಿಯ ಕೊಡುಗೆಯಾದರೂ ಈಗ ಟೈವಾನ್ ದೇಶದಿಂದ ಅನುಕರಣೆ ಮಾದರಿಯೂ ಹೊರಬಂದಿದೆ.
http://hasebikes.com/150-1-tandem-pino-tour.html
ಗಂಟೆ ಹನ್ನೆರಡಾಗಿತ್ತು. Geoff ಎರಡು ದಿನ ಹಿಂದೆ times ದಿನಪತ್ರಿಕೆಯಲ್ಲಿ ಈ ಹೊಟೆಲ್ ಮತ್ತು ವಿಶಿಷ್ಟ ಚಾ ಬಗೆಗೆ ಒಂದು ವರದಿ ಪ್ರಕಟವಾದುದನ್ನು ನೋಡಿದ್ದರು. ಕಲ್ಲಡ್ಕದ ಕೆಟಿ ಕುಡಿದ ನಂತರ ಮಂಗಳೂರು ನನ್ನ ಮಟ್ಟಿಗೆ ಒಂದೂವರೆ ಘಂಟೆ ಎಂದೆ. ದಾರಿಯಲ್ಲಿ ಊಟ ಸಿಗುವುದೋ ವಿಚಾರಿಸಿದರು. ಸಿಗಬಹುದಾದ ಬಿಸಿ ರೋಡ್ ಹೆಚ್ಚು ದೂರವಲ್ಲ. ಬಾನುವಾರ. ಮುಂದೆ ಮಂಗಳೂರಿನ ವರೆಗೆ ಊಟಕ್ಕೆಂದು ನಿಲ್ಲುವ ಬದಲು ಇಲ್ಲಿಯೇ ದೋಸೆ ತಿಂದರೆ ಉತ್ತಮವೆನ್ನುವುದು ನನ್ನ ಸೂಚನೆ ಪ್ರಕಾರ ತೀರ್ಮಾನಿಸಿದರು. ಹೀಗೆ ದೋಸೆ ಕೆಟಿಯ ನಡುವ ಸಂಗ್ರಹವಾದ ಸುದ್ದಿ ಇಷ್ಟು.
Geoff ಮತ್ತು Lodi - ಬೆಳ್ಜಿಯಂ ದೇಶಕ್ಕೆ ಸೇರಿದವರು. Geoff ಒಂದು ಥಿಯೇಟರ್ ಮೆನೇಜರ್ ಮತ್ತು Lodi ಪುಟ್ಟ ಮಕ್ಕಳ ಟೀಚರ್. ಇಬ್ಬರೂ ಸೈಕಲಿನಲ್ಲಿ ಕೆಲಸಕ್ಕೆ ಹೋಗುವವರು. ಕೆಲಸಕ್ಕೆ ಒಂದು ವರ್ಷ ರಜೆಮಾಡಿ ತಿರುಗಾಡುತ್ತಿದ್ದಾರೆ. ಜುಲೈ ತಿಂಗಳಲ್ಲಿ ಪ್ರವಾಸ ಹೊರಟಿದ್ದಾರೆ. ದುಬೈಯಿಂದ ಕೊಚ್ಚಿಗೆ ಹಾರಿ ಬಂದು ಮುಂಬಯಿ ಕಡೆಗೆ ಹೊರಟಿದ್ದಾರೆ. ವಿವರಗಳು ಅವರ ಜಾಲತಾಣದಲ್ಲಿವೆ. ಗೂಗಲ್ ಅನುವಾದ ಸ್ವಷ್ಟವಲ್ಲವಾದರೂ ಸಾಮಾನ್ಯ ಅರಿವು ಮೂಡಿಸುತ್ತದೆ.
ಪಾಣೆಮಂಗಳೂರು ದಾಟುವಾಗ ಅವರನ್ನು ವಾಹನದಟ್ಟಣೆ ಕಡಿಮೆ ಇರುವ ಹಳೆ ರಸ್ತೆಯಲ್ಲಿ ಕರೆದೊಯ್ದೆ. ಹಿಂಬಾಲಿಸುತ್ತಿದ್ದ ಅವರು ಗಲಿಬಿಲಿಗೊಡು ನಿದಾನಿಸಿದರು ಯಾಕೆಂದರೆ ಅವರ ಜಿಪಿಎಸ್ ಹೆದ್ದಾರಿಯಲ್ಲಿಯೇ ಮುಂದುವರಿಯುವುದರ ಸೂಚಿಸುತಿತ್ತು. ಶತಮಾನದ ಅಂಚಿನಲ್ಲಿರುವ ಹಳೆಯ ಸೇತುವೆ ಹಾಗೂ ಟಿಪ್ಪು ಸುಲ್ತಾನನ ಕಾಲದ ಕಲ್ಲಿನಿಂದ ಮಾಡಿದ ಫಿರಂಗಿ ತೋರಿಸಿದೆ. ಅದರ ಮುಂದೆ ಯಾವುದೇ ವಿವರಣೆ ಇಲ್ಲದ ಕಾರಣ ಅವರು ಅವರ ಸೈಕಲಿನೊಂದಿಗೆ ಫಿರಂಗಿಯ ಚಿತ್ರ ಸೆರೆ ಹಿಡಿದದ್ದು ನನ್ನ ಒತ್ತಾಯಕ್ಕೆ.
ಬಿ ಸಿ ರೋಡು ದಾಟಿದ ನಂತರ ನಾನು ಅವರಿಂದ ಬೀಳ್ಕೊಂಡೆ. ಅವರೊಂದಿಗೆ ಸುಮಾರು ಹದಿನೈದು ಕಿಮಿ ಸಾಗುವ ಸದವಕಾಶ ನನ್ನದಾಗಿತ್ತು. ಮಾತನಾಡುತ್ತಾ ನಾವು ಹತ್ತು ನಿಮಿಷ ಅಲ್ಲಿದ್ದೆವು. ಅವರು ಮುಂದಕ್ಕೆ ಸಾಗಿದ ನಂತರ ಪಕ್ಕದಲ್ಲಿದ್ದವರು ಹೇಳಿದರು – ಎದುರಿನಲ್ಲಿ ತಾಜ್ ಸೈಕಲ್ ಅಂಗಡಿ ಉದ್ಘಾಟನೆ. ಮೊದಲೇ ನಮಗೆ ಅರಿವಿಗೆ ಬಂದಿದ್ದರೆ ನಾನು ಈ ಬೆಳ್ಜಿಯಮ್ ಜೋಡಿಯನ್ನು ಅಲ್ಲಿ ಕರೆದೊಯ್ದು ಅವರಿಗೆ ಶುಭ ಕೋರುತ್ತಿದ್ದೆವು.
ಕಾರಣಾಂತರ ನನ್ನ ಕೆಮರಾ ದ್ವಂಸಗೊಂಡ ಕಾರಣ ಉತ್ತಮ ಚಿತ್ರ ತೆಗೆಯಲು ಸಾದ್ಯವಾಗಲಿಲ್ಲ. ಜತೆಯಲ್ಲಿರುವ ಪೋಟೊ ತೆಗೆದದ್ದು ಬಹು ಕಾಲ ಉಪಯೋಗಿಸದಿದ್ದ ಅಗಲ ಕೋನದ ಮಸೂರದ ಕೆಮರದಲ್ಲಿ. ಅದುದರಿಂದ ಗುಣಮಟ್ಟ ಕಳಪೆ. http://is.gd/k0uj4b ಯಲ್ಲಿ ಅವರ ಸೈಕಲ್ ಚಾಲನೆ ನೋಡಬಹುದು.